ಪುತ್ತೂರು : ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ ಎಂದು ಭಾರತೀಯ ಜನತಾ ಪಾರ್ಟಿಯ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಹೇಳಿದರು.
ಹಿಂದೂ ಮುಖಂಡ ಶರಣ್ ಪಂಪ್ವೆಲ್ ಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ನಡೆಯನ್ನು ಅವರು ಖಂಡಿಸಿದ್ದು, ಹಿಂದೂ ಸಮಾಜ ಮೌನವಾಗಿದೆ, ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದು ನಿಮ್ಮ ಮೂರ್ಖತನ. ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ ನೀಡಲು ಹೊರಟರೆ ಏನಾಗಬಹುದೂ ಎಂದೂ ಕರಾವಳಿಯ ಇತಿಹಾಸವನ್ನು ತಿರುಗಿ ನೋಡಿಕೊಂಡರೆ ಒಳಿತು ಎಂದರು.
ಮತೀಯವಾದಿ ದೇಶದ್ರೋಹಿ ಸಂಘಟನೆಗಳ ಬೆಂಬಲದಿಂದ ಜನಪ್ರತಿನಿಧಿಯಾಗಿ ಇದ್ದುಕೊಂಡು ದೇಶದ್ರೋಹಿ ಸಂಘಟನೆಗಳ ಋಣ ಸಂದಾಯ ಮಾಡಲು ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಮಟ್ಟಿಗೆ ಹೇಳಿಕೆಗಳನ್ನು ನೀಡುವುದು ಅಕ್ಷಮ್ಯ ಅಪರಾಧ. ಪೋಲಿಸ್ ಇಲಾಖೆ ಅಂತವರ ಹಾಗೂ ಅವರನ್ನು ಪ್ರೇರೆಪಿಸುವವರ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮವನ್ನು ಜರುಗಿಸಿ ಸಮಾಜವನ್ನು ರಕ್ಷಿಸಬೇಕು ಎಂದು ತಿಳಿಸಿದರು.