ವಿಟ್ಲ : ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ನಿ. ಇದರ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ದೀಪ ಪ್ರಜ್ವಲನೆ ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಹಾರೈಸಿದರು.




























