ಪುಂಜಾಲಕಟ್ಟೆ : ಉಲಾಯಿ-ಪಿದಾಯಿ (ಅಂದರ್-ಬಾಹರ್) ಅದೃಷ್ಟದ ಆಟವನ್ನು ಆಡುತ್ತಿರುವ ಸ್ಥಳಕ್ಕೆ ಪೊಲೀಸ್ ದಾಳಿ ನಡೆಸಿ, 23 ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಕಟ್ಟಡದ ಹಿಂಭಾಗದ ನಡೆದಿದೆ.
ಸೆ.19 ರಂದು ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್-ಬಹಾರ್ ) ಎಂಬ ಅದೃಷ್ಟದ ಆಟವನ್ನು ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್ಐ (ಕಾ&ಸು) ನಂದಕುಮಾರ್ ಎಂ.ಎಂ ರವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಕೃತ್ಯದಲ್ಲಿ ತೊಡಗಿದ್ದ 23 ಮಂದಿಯನ್ನು ವಶಕ್ಕೆ ಪಡೆದು, ಜುಗಾರಿ ಆಟಕ್ಕೆ ಉಪಯೋಗಿಸಿದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡಿರುವ ನಗದು ಸೇರಿ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ರೂ 36729/- ಆಗಿದೆ.
ಈ ಬಗ್ಗೆ ನ್ಯಾಯಾಲಯದಿಂದ ಸೆ.20 ರಂದು ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 67/2024 ಕಲಂ: 79, 80 ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.