ಬಂಟ್ವಾಳ : ಮಂಗಳೂರು-ಧರ್ಮಸ್ಥಳ ಮಧ್ಯೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ಸಂಜೆ(ಸೆ.23) ವಗ್ಗ ಸಮೀಪದ ಕೊಪ್ಪಳದಲ್ಲಿ ನಡೆದಿದೆ.

ಘಟನೆಯಲ್ಲಿ ಬಸ್ಸು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಯುವಕರು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸಹಕರಿಸಿದ್ದಾರೆ.
ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

























