ಸುಳ್ಯ : ಬಸ್ಸಿನಲ್ಲಿ ಯುವತಿಯೊಂದಿಗೆ ಯುವಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದ್ದು, ಯುವಕನಿಗೆ ಸುಳ್ಯದಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.
ಬಸ್ಸಿನಲ್ಲಿ ಅನುಚಿತವಾಗಿ ವರ್ತಿಸಿದ್ದ ಅಬ್ದುಲ್ ನಿಯಾಝ್ ವಿರುದ್ಧ ಯುವತಿ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಮೇಲೆ ತಂಡದಿಂದ ಹಲ್ಲೆ, ಕೊಲೆ ಯತ್ನ ನಡೆಸಲಾಗಿದೆ ಎಂದು ಆರೋಪಿತ ಯುವಕ ಅಬ್ದುಲ್ ನಿಯಾಝ್ ಸುಳ್ಯ ಠಾಣೆಗೆ ದೂರು ನೀಡಿದ್ದು, ಈ ಪ್ರಕರಣವೂ ದಾಖಲಾಗಿದೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವರ್ಷಿತ್ ಚೊಕ್ಕಾಡಿ ಹಾಗೂ ಮಿಥುನ್ ಸುಳ್ಯ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.


























