ಸುಳ್ಯ : ಕಂಟೈನರ್ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಕಾಸರಗೋಡಿನ ಜುನೈದ್ ಎಂದು ತಿಳಿದು ಬಂದಿದ್ದು, ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಕೂಟಿ ನುಜ್ಜುಗುಜ್ಜಾಗಿದೆ.


























