ಬಂಟ್ವಾಳ : ಲಾರಿ- ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಸಹಪ್ರಯಾಣಿಕ ಮಂಗಳವಾರ (ಸೆ.24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಂಜೂರುಪಂಜ ನಿವಾಸಿ ಚೇತಕ್, ಹೊಸಪೇಟೆ ನಿವಾಸಿ ಯತೀನ್ ಇಬ್ಬರೂ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಹಿನ್ನೆಲೆ:
ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಸಮೀಪದ ಮಾರಿಪಳ್ಳ ಜಂಕ್ಷನ್ ಎಂಬಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರಿಗೆ ಗಂಭೀರವಾಗಿ ಗಾಯವಾಗಿತ್ತು.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಹಪ್ರಯಾಣಿಕನಾಗಿದ್ದ ಸೇವಂತ್ ನೆಡ್ಚಿಲು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.


























