ಮಂಗಳೂರು : ಫುಟ್‌ಪಾತ್‌ನಲ್ಲಿ ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ನಡೆದಿದೆ.
ಶಬರಿ ಪೊಲೀಸ್ ವಶವಾದವನು.
ಯುವತಿಯರು ನಡೆದುಕೊಂಡು ಹೋಗುತ್ತಿದ್ದಾಗ ಈತ ಅನುಚಿತವಾಗಿ ವರ್ತಿಸುತ್ತಿದ್ದ. ಯುವಕನನ್ನು ತರಾಟೆಗೆ ತೆಗೆದುಕೊಂಡ ಯುವತಿಯರು ಬಳಿಕ ಆತನ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಅಲ್ಲದೆ ಆತನ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

























