ಬೆಳ್ತಂಗಡಿ : ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮವು ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ.
ಸೆ.27ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣೆ ಸಮಾರಂಭ ನಡೆಯಲಿದೆ.
ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ ಸಚಿವರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕುತ್ಲೂರು ಗ್ರಾಮಸ್ಥರ ಪರವಾಗಿ ಹರೀಶ್ ಡಿ.ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ (Best Tourism Village Competition-2024) ಸ್ಪರ್ಧೆ ಏರ್ಪಡಿಸಿತ್ತು. ಈ ಸ್ಪರ್ಧೆಯಡಿ ದ.ಕ.ಜಿಲ್ಲೆಯ (Adventure Tourism Category) ಅಡಿಯಲ್ಲಿ ಕುತ್ಲೂರು ನಿವಾಸಿಗಳಾದ ಹರೀಶ್ ಡಿ.ಸಾಲ್ಯಾನ್, ಶಿವರಾಜ್ ಮತ್ತು ಸಂದೀಪ್ ಪೂಜಾರಿ ನಾರಾವಿ ಅವರು ಕುತ್ಲೂರು ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗಿನ ಬಗ್ಗೆ ಒಂದು ಡಾಕ್ಯುಮೆಂಟರಿ ಸಿದ್ಧಪಡಿಸಿ ಸ್ಪರ್ಧಾ ನಿಯಮದಂತೆ ಆನ್‌ಲೈನ್‌ನಲ್ಲಿ ಆಪ್‌ಲೋಡ್ ಮಾಡಿದ್ದರು.
ದೇಶಾದ್ಯಂತ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮ ಆಯ್ಕೆಯಾಗಿದೆ.