ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯನ್ನು ವಿರೋಧಿಸಿ “100 ನಾಟೌಟ್” ಎಂಬ ಟ್ಯಾಗ್ ಲೈನ್ ನೊಂದಿಗೆ ಪ್ರತಿಭಟನೆಯು ಪುತ್ತೂರಿನ ಮಾಜಿ ಶಾಸಕರಾದ ಶ್ರೀಮತಿ ಶಕುಂತಳಾ ಶೆಟ್ಟಿ ಮತ್ತು ಕೆಪಿಸಿಸಿ ಉಸ್ತುವಾರಿಗಳಾದ ಟಿ.ಪಿ ರಮೇಶ್ ರವರ ನೇತೃತ್ವದಲ್ಲಿ ನಡೆಯಲಿದೆ.
ಪ್ರತಿಭಟನೆ ನಡೆಯುವ ಸ್ಥಳ ಮತ್ತು ದಿನಾಂಕ :-
ಜೂ.12 ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯ ಬಳಿಯ ಪೆಟ್ರೋಲ್ ಬಂಕ್.
ಜೂ.13 ರಂದು ನರಿಮೊಗರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನರಿಮೊಗರಿನ ಮುಕ್ವೆ ಮತ್ತು ಆರ್ಯಾಪು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಬಕ ಜಂಕ್ಷನ್ ಹಾಗೂ ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕುಂಬ್ರ ಜಂಕ್ಷನ್, ಉಪ್ಪಿನಂಗಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಉಪ್ಪಿನಂಗಡಿ ಜಂಕ್ಷನ್, ಪುಣಚ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿಟ್ಲ ಜಂಕ್ಷನ್.
ಜೂ.14 ರಂದು ನರಿಮೊಗರು ಗ್ರಾಮ ಪಂಚಾಯತ್, ಮುಂಡೂರು, ಮತ್ತು ಇತರ ಪ್ರದೇಶಗಳಲ್ಲಿ ಹಾಗೂ ಜೂ.
15 ರಂದು ಪುತ್ತೂರಿನ ವಿವಿಧ ಪೆಟ್ರೋಲ್ ಬಂಕ್ ಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಯಂ.ಬಿ ವಿಶ್ವನಾಥ ರೈ, ವಿಟ್ಟ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಡಾ.ರಾಜಾರಾಮ್ ಕೆ ಬಿ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.