ಮಡಂತ್ಯಾರು : ಉರುವಾಲು ಗ್ರಾಮದಲ್ಲಿ ಮನೆಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿದೆ.
ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಂಜೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಜೊತೆಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಈ ಸಂದರ್ಭ ಸೇಸಪ್ಪ ಗೌಡ ರವರು ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಬರಲು ಹೋಗಿದ್ದರು. ಆದ್ದರಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ಸೇಸಪ್ಪ ತಿಳಿಸಿದ್ದಾರೆ.