ಮಂಗಳೂರು : ಧಾರ್ಮಿಕ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಶಿಕ್ಷಕರೋರ್ವರು ಧರ್ಮ ದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕ ಡಾ. ಅರುಣ್ ಉಳ್ಳಾಲ ಅವರ ಮೇಲೆ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಐಟಿ ಕಾಯಿದೆಯ ಕಲಂ 66(ಸಿ) ಮತ್ತು ಬಿಎನ್‌ಎಸ್ 2023ರ ಕಲಂ 196 ಮತ್ತು 351ರಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.