ಬಂಟ್ವಾಳ : ತಾಲೂಕಿನಲ್ಲಿ ರವಿವಾರ ಸಂಜೆ ಗುಡುಗು- ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಕೇಪುನಲ್ಲಿ ಮನೆಗೆ ಸಿಡಿಲು ಬಡಿದು ಹಾನಿಯಾಗಿರುವ ಜೊತೆಗೆ ನರಿಕೊಂಬುವಿನಲ್ಲಿ ಮನೆಯ ಮೇಲೆ ತೆಂಗಿನಮರ ಬಿದ್ದು ಹಾನಿಯಾಗಿದೆ.
ಕೇಪು ಗ್ರಾಮದ ಕೋಡಂದೂರಿನಲ್ಲಿ ಜಯರಾಮ ನಾಯ್ಕ ಅವರ ಮನೆಗೆ ಸಿಡಿಲು ಬಡಿದು ಗೋಡೆ ಬಿರುಕು ಬಿಟ್ಟಿದ್ದು, ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದೆ.
ಅಳಿಕೆ ಗ್ರಾಮದ ಅರುಂಬು ನಾರಾಯಣ ಮೂಲ್ಯ ಅವರ ಮನೆಗೆ ಸಿಡಿಲು ಬಡಿದು ಗೋಡೆಗೆ ಹಾನಿಯಾಗಿದೆ.
ನರಿಕೊಂಬು ಗ್ರಾಮದ ಮಾರುತಿನಗರದಲ್ಲಿ ಆಶಾ ಉಮೇಶ್ ನಾಯ್ಕ ಅವರ ಮನೆ ಮೇಲೆ ತೆಂಗಿನಮರ ಬಿದ್ದು ಹೆಚ್ಚಿನ ಹಾನಿಯಾಗಿದೆ. ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಗೋಡೆಗೂ ಹಾನಿಯಾಗಿದೆ.
ಯಾವುದೇ ಜೀವಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.