ಮಂಗಳೂರು : ಕೂಳೂರಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕ ಅಂಗಡಿಗೆ ಬರುತ್ತಿದ್ದ ಮಹಿಳೆಯೋರ್ವರಿಗೆ ವೀಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ಯುವಕನನ್ನು ಅಂಗಡಿಯವರು ಕೆಲಸದಿಂದ ತೆಗೆದು ಹಾಕಿರುವ ಘಟನೆ ನಡೆದಿದೆ.
ರಾತ್ರಿಮಹಿಳೆಗೆ ವೀಡಿಯೋ ಕರೆ ಮಾಡಿದ್ದ ಯುವಕ ಅಸಭ್ಯವಾಗಿ ವರ್ತಿಸಿದ್ದ. ಇದರಿಂದ ಆಕ್ರೋಶಗೊಂಡ ಮಹಿಳೆಯರು ಅಂಗಡಿಗೆ ಬಂದು ಯುವಕನನ್ನು ತರಾಟೆಗೆ ತೆಗೆದುಕೊಂಡು ಕೈಯಿಂದ ಹಲ್ಲೆ ನಡೆಸಿದ್ದರು. ಮಹಿಳೆಯರು ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು
‘ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕ ವೀಡಿಯೋ ಕರೆ ಮಾಡಿದ್ದ. ಈ ವಿಷಯ ಗೊತ್ತಾದ ಕೂಡಲೇ ಕೆಲಸದಿಂದ ತೆಗೆದು ಹಾಕಿದ್ದೇವೆ. ಮಾಲಕರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆದರೆ ಕೃತ್ಯ ನಡೆಸಿದ್ದು ಕೆಲಸಗಾರ. ಆತನನ್ನು ತೆಗೆದು ಹಾಕಲಾಗಿದೆ ಎಂದು ಅಂಗಡಿಯ ಮಾಲಕರು ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.