ವಿಟ್ಲ : ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಇದರ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ವಿಟ್ಲದ ಹಿಂದೂ ರುದ್ರ ಭೂಮಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್, ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತಾ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ನಗರ ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾದ ನಿತೇಶ್ ಕಲ್ಲೇಗ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ನಾಯ್ತೋಟ್ಟು, ಮಂಡಲದ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ವಿಟ್ಲ ಮತ್ತು ಪುನೀತ್ ಮಾಡತ್ತಾರು, ಪುತ್ತೂರು ಗ್ರಾಮಾಂತರ ಮಂಡಲದ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಮರುವಾಳ ಮತ್ತು ಸಂತೋಷ್ ಪರಂದಾಜೆ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಉದಯ ಆಲಂಗರು ಮತ್ತು ಪ್ರಧಾನ ಕಾರ್ಯದರ್ಶಿ ಹರೀಶ್ ವಿಟ್ಲ, ವಿಟ್ಲ ಶಕ್ತಿ ಕೇಂದ್ರದ ಅಧ್ಯಕ್ಷರಾದ ಸದಾನಂದ ಗೌಡ ಮತ್ತು ಶಿಶಿರ್, ವಿಟ್ಲ ಪಟ್ಟಣ ಪಂಚಾಯತಿ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ ಮತ್ತು ಗೋಪಿಕೃಷ್ಣ ಕೇಪು ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ಕರವೀರ, ಹಿರಿಯರಾದ ಮೋಹನ್ ದಾಸ್ ಉಕ್ಕುಡ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರ್ವಾಹಣೆ ಮತ್ತು ಸ್ವಾಗತ ಹರೀಶ್ ಪೂಜಾರಿ ಮರುವಾಳ ನೇರವೇರಿಸಿದರು. ರವಿಶಂಕರ್ ವಿಟ್ಲ ಧನ್ಯವಾದಗೈದರು.
ಈ ಸಂದರ್ಭದಲ್ಲಿ ರುದ್ರ ಭೂಮಿಯ ಕಾರ್ಮಿಕರಾದ ಪುರಂದರ ಹಾಗೂ ಪೌರಕಾರ್ಮಿಕ ಗುಂಡನಾಯಕರನ್ನು ಸನ್ಮಾನಿಸಲಾಯಿತು.