ಪುತ್ತೂರು : ಕೋವಿಡ್ -19 ಎರಡನೇ ಅಲೆಯ ಸಂದರ್ಭ ಶಿಕ್ಷಣ ವ್ಯವಸ್ಥೆ ಮತ್ತು ವ್ಯವಹಾರದ ದೃಷ್ಟಿಯಿಂದ ಮೊಬೈಲ್ ನೆಟ್ ವರ್ಕ್ ಅವಲಂಬಿತರಿಗೆ ಎದುರಾಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಶಾಸಕ ಸಂಜೀವ ಮಠಂದೂರು ರವರು ವಿವಿಧ ನೆಟ್ ವರ್ಕ್ ಸಂಸ್ಥೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಮೊಬೈಲ್ ನೆಟ್ ವರ್ಕ್ ಸಮಸ್ಯೆಗಳ ಕುರಿತು ಪರಿಹಾರ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲೇ ಪ್ರಥಮ ಸಭೆ ಪುತ್ತೂರಿನಲ್ಲಿ ನಡೆಯಿತು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ಡಾ.ಯತೀಶ್ ಉಳ್ಳಾಲ್, ತಹಸೀಲ್ದಾರ್ ರಮೇಶ್ ಬಾಬು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್.ಎಮ್ ಹಾಗೂ ಬಿ.ಎಸ್.ಎನ್.ಎಲ್, ಏರ್ ಟೆಲ್,ಜಿಯೋ ಕಂಪೆನಿಯ ಅಧಿಕಾರಿಗಳು ಉಪಸ್ಥಿತರಿದ್ದರು.