ಬೆಳ್ತಂಗಡಿ : ಸಹಾಯ ಮಾಡುವ ಹೆಸರು ಹೇಳಿ ಇನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಅಬೂಬಕ್ಕರ್ (71) ಅವರ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಘಟನೆ ಬೆಳ್ತಂಗಡಿ ಗೇರುಕಟ್ಟೆ ಕೆನರಾ ಬ್ಯಾಂಕ್‌ನ ಎಟಿಎಂ ಕೇಂದ್ರದಲ್ಲಿ ನಡೆದಿದೆ.
ಅ.2 ರಂದು ಮಧ್ಯಾಹ್ನ 12 ಗಂಟೆಗೆ ಹಣ ಡ್ರಾ ಮಾಡುತ್ತಿರುವಾಗ ಒಳ ಪ್ರವೇಶಿಸಿದ ಅಪರಿಚಿತರಿಬ್ಬರು ಹಿಂದಿಯಲ್ಲಿ ಮಾತಾಡಿ ಸಹಾಯಕ್ಕೆ ಬಂದಿದ್ದರು. ಅಬೂಬಕ್ಕರ್ ಸಹಾಯದ ಅಗತ್ಯ ಇಲ್ಲ ಎಂದು ಹೇಳಿದರೂ, ಒಳಗಡೆಯೇ ನಿಂತಿದ್ದರು. ಹಣ ತೆಗೆದು ಎಟಿಎಂ ಕೇಂದ್ರದಿಂದ ಕಾರ್ಡ್ ಸಹಿತ ಹೊರಗೆ ಹೋಗಿದ್ದರು. ನಂತರ ಅ.4 ರಂದು ಅಳಿಯ ಹಾಗೂ ಮಗ ಹಾಕಿದ ಹಣವನ್ನು ಡ್ರಾ ಮಾಡಲು ಎಟಿಎಂ ಕೇಂದ್ರಕ್ಕೆ ಹೋದಾಗ ಕಾರ್ಡ್ ರೀಡ್ ಆಗಲಿಲ್ಲ. ಅನುಮಾನದಿಂದ ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ ಎಟಿಎಂ ಕಾರ್ಡ್ ಬದಲಾಗಿದೆ ಎಂದು ತಿಳಿಸಿದ್ದು, ನಂತರ ಬ್ಯಾಲೆನ್ಸ್ ಚೆಕ್ ಮಾಡಿದಾಗ ಖಾತೆಯಲ್ಲಿದ್ದ 49,200 ರೂ. ಅನ್ನು ವಂಚಿಸಿರುವುದು ತಿಳಿದು ಬಂದಿದೆ.
ಎಟಿಎಂ ಕೇಂದ್ರದಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಬೇರೆ ಬೇರೆ ಎಟಿಎಂ ಕೇಂದ್ರದಲ್ಲಿ ಹಣ ತೆಗೆದು ಕಳವು ಮಾಡಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅ.ಕ್ರ ಸಂಖ್ಯೆ 33/2016 ಕಲಂ 174 ಸಿ.ಆರ್.ಪಿ.ಸಿ. ಯಂತೆ ಪ್ರಕರಣ ದಾಖಲಾಗಿದೆ.