ಬೆಳ್ತಂಗಡಿ : ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಮೃತ ಬೈಕ್ ಸವಾರ.
ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಧೀಶ್ ಪೈಂಟಿಂಗ್ ವೃತ್ತಿ ನಡೆಸುತ್ತಿದ್ದು, ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಡಿವೈಡರ್ನ ಎರಡು ವಿದ್ಯುದ್ದೀಪಕ್ಕೆ ಹಾನಿಯಾಗಿದೆ. .
ಮೃತರು ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.