ಬಂಟ್ವಾಳ : ಪತ್ರಿಕಾ ಏಜೆಂಟ್, ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ವಸಂತ ಆಚಾರ್ಯ (56) ಹೃದಯಾಘಾತದಿಂದ ನಿಧನರಾದರು.
ವಸಂತ ಆಚಾರ್ಯ ಅವರು ಕೊಡುಗೈ ದಾನಿಯಾಗಿದ್ದು, ವಿಶ್ವಕರ್ಮ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದು, ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.
ವಸಂತ ಆಚಾರ್ಯ ಅವರು ಇಂದು ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಹಠಾತ್ ಆಗಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.