ಪುತ್ತೂರು : ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಹಲ್ಲೆ ನಡೆಸಿದ ನಾಲ್ವರನ್ನು ಪುತ್ತೂರು ನಗರಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಪ್ರಕರಣವು ರೈಲ್ವೇ ಪೊಲೀಸರ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ವಶಕ್ಕೆ ಪಡೆದವರನ್ನು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಹಲ್ಲೆ ನಡೆಸಿದ ಯುವಕರ ತಂಡ ಅನ್ಯಧರ್ಮಿಯರಾಗಿದ್ದು, ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.