ಬೆಂಗಳೂರು: ರಾಜ್ಯದ ಬ್ಯಾಂಕಿಂಗ್ ಕ್ಷೇತ್ರದಲ್ಲಿರುವ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ಕನ್ನಡದಲ್ಲಿಯೇ ಪರೀಕ್ಷೆಯ ಬರೆಯಬಹುದಾಗಿದೆ.
ಐಬಿಪಿಎಸ್ ನಡೆಸುವ ಪ್ರಾದೇಶಿಕ, ಬ್ಯಾಂಕಿಂಗ್ ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಕನ್ನಡದಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಗುಡ್ನ್ಯೂಸ್ ನೀಡಿದ್ದು, ಇನ್ನುಂದೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆಸುವ ಪರೀಕ್ಷೆಯನ್ನ ಕನ್ನಡದಲ್ಲೂ ಬರೆಯಲು ಅವಕಾಶ ಮಾಡಿಕೊಟ್ಟಿದೆ.
ಬ್ಯಾಂಕಿಂಗ್ ಉದ್ಯೋಗ ನೇಮಕಾತಿಗೆ ನಡೆಸುವ ಐಬಿಪಿಸ್ ಪರೀಕ್ಷೆಯನ್ನು ಕನ್ನಡ ಮತ್ತು ಕೊಂಕಣಿಯಲ್ಲಿ ಬರೆಯಲು ಅವಕಾಶ ನೀಡಿದೆ. ಐಬಿಪಿಎಸ್ನ ಈ ನಿರ್ಧಾರದಿಂದ ಕರ್ನಾಟಕದ ಸಾವಿರಾರು ಯುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಯುವಕ, ಯುವತಿಯರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅನುಕೂಲವಾಗಲಿದೆ.