ನೆಲ್ಯಾಡಿ : ಗ್ಯಾಸ್ ಟ್ಯಾಂಕರ್ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ನೆಲ್ಯಾಡಿ ಸಮೀಪದ ಎಂಜಿರಾ ಎಂಬಲ್ಲಿ ಜೂ.13 ರಂದು ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ತಿರುವಿನಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಅಪಘಾತ ವಲಯವಾಗಿ ಗೋಚರಿಸುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತ ಪಡಿಸಿದ್ದಾರೆ.