ಪುತ್ತೂರು : ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಜಾತ್ರೋತ್ಸವದ ಪೂರ್ವ ಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತೂರಾಯರು ಜಾತ್ರೋತ್ಸವದ ರೂಪುರೇಷೆಗಳ ಬಗ್ಗೆ ತಿಳಿಸಿದರು.
ಆಡಳಿತ ಸಮಿತಿಯ ಅಧ್ಯಕ್ಷರಾದ ಗಂಗಾಧರ ಅಮೀನ್ ಹೊಸಮನೆ, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.