ವಿಟ್ಲ : ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ವಿಟ್ಲ ಸಮೀಪದ ಮಾಣಿಲ ಎಂಬಲ್ಲಿ ನಡೆದಿದೆ.

ಕೇರಳಕ್ಕೆ ವಾಹನದ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ತಡೆದ ಬಜರಂಗದಳ ಕಾರ್ಯಕರ್ತರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಎರಡು ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ.

























