ಪುತ್ತೂರು : ವಿಶ್ವ ಹಿಂದೂ ಪರಿಷದ್ ನೂತನ ಜಿಲ್ಲಾ ಕಾರ್ಯಾಲಯ ಎಸ್.ಡಿ.ಸಿ.ಸಿ ಬ್ಯಾಂಕ್ ಎದುರು ನಿರ್ಮಾಣವಾಗಲಿದ್ದು, ಇದರ ಅಂಗವಾಗಿ ಭೂಮಿ ಪೂಜೆ ಅ.23 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ದಿವ್ಯ ಉಪಸ್ಥಿತ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ, ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿಗಳಾದ ಗೋಪಾಲ್ ಜೀ ಪಾಲ್ಗೊಳ್ಳಲಿದ್ದಾರೆ.
ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ.