ಮೂಡುಬಿದಿರೆ : ಬಿಲ್ಲವ ಮಹಿಳೆಯರನ್ನು ಅವಮಾನಿಸಿ, ಕುಣಿತ ಭಜನೆಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಆರೋಪ ಹೊತ್ತಿರುವ ಪುತ್ತೂರು ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಭಜನೆಯ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.
200ಕ್ಕಿಂತಲೂ ಅಧಿಕ ಕುಣಿತ ಭಜನೆಯ ಹೆಣ್ಮಕ್ಕಳು ಹಾಗೂ ಮಹಿಳೆಯರು ಪೊಲೀಸ್ ಠಾಣೆಗೆ ಆಗಮಿಸಿ ಬೇಸರ ವ್ಯಕ್ತಪಡಿಸಿದರು.
ಪುತ್ತೂರು ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

























