ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಶಾಂತಿನಗರ ನಿವಾಸಿ , ಕೆಇಬಿ ಸಿಬ್ಬಂದಿ ನಾಗೇಶ ಎಂಬವರ ಪುತ್ರ ಪ್ರಮೋದ್ (21) ಡೆಂಗ್ಯೂ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಹತ್ತು ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಮೋದ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಪ್ರಮೋದ್ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಮೃತರು ತಂದೆ ತಾಯಿ ಓರ್ವ ಸಹೋದರನನ್ನು ಅಗಲಿದ್ದಾರೆ.