ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು.
ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ.
1693 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಎಂ.ಎ. ಸ್ನಾತಕೋತ್ತರ ಪದವೀಧರ ಕಿಶೋರ್., ವಿದ್ಯಾರ್ಥಿ ದೆಸೆಯಿಂದ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ದ.ಕ. ಜಿಲ್ಲಾಧ್ಯಕ್ಷ, ಯುವ ಮೋರ್ಚಾದ ಕರ್ನಾಟಕ ರಾಜ್ಯ ಉಪಾಧ್ಯಕ್ಷ, ಮೆಸ್ಕಾಂ ನಾಮನಿರ್ದೇಶಿತ ಸದಸ್ಯರಾಗಿದ್ದ ಅವರು ಬಿಜೆಪಿ ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅವರ ತಂದೆ ರಾಮಣ್ಣ ಭಂಡಾರಿ ಕೂಡ ಪುತ್ತೂರು ತಾಲೂಕಿನಲ್ಲಿ ಆರ್‌ಎಸ್‌ಎಸ್ ಕಟ್ಟಲು ಶ್ರಮಿಸಿದ್ದರು.

























