ಪುಟ್ಟ ಹುಡುಗಿಯೊಬ್ಬಳು ತನ್ನ ತಂದೆಯೊಂದಿಗೆ ಸ್ಕೂಟರ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಚಿಕ್ಕ ಬಾಲಕಿಗೆ ಸ್ಕೂಟಿ ಓಡಿಸಲು ಅವಕಾಶ ನೀಡಿರುವುದಕ್ಕೆ ಜನರು ಅಸಮಾಧಾನ ಹೊರಹಾಕಿದ್ದಾರೆ.
ಯೂನಿಫಾರಂ ಧರಿಸಿದ ಬಾಲಕಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿರುವುದನ್ನು ತೋರಿಸುವ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ರಸ್ತೆ ಸುರಕ್ಷತೆ ಮತ್ತು ಪೋಷಕರ ಜವಾಬ್ದಾರಿ ಕುರಿತು ಚರ್ಚೆಗೆ ಗ್ರಾಸವಾಗಿದೆ.