ಪುತ್ತೂರು : ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಅ.26 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಬಳಿಕ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕಬಕದಲ್ಲಿ ಸ್ವಾಗತಿಸಿದ ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಬಳಿಕ ಬಿಜೆಪಿ ಕಚೇರಿಯಲ್ಲಿ ಮಂಡಲದ ಅಭಿನಂದನೆ ನಂತರ ಜೈನ ಭವನದಲ್ಲಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಸಂಸದರು, ಜಿಲ್ಲೆಯ, ಮಂಡಲದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

























