ಪುತ್ತೂರು : ಟೀಮ್ ಒಳಿತು ಮಾಡು ಮನುಷ ತಂಡ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ಮುಂದಾಳತ್ವದಲ್ಲಿ, ಊರ-ಪರವೂರ ದಾನಿಗಳ ಸಹಕಾರದಿಂದ ಜೆಸಿಐ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಎಲೈಟ್, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರು, ಓಂ ನ್ಯೂಸ್ ಬಳಗ ಪುತ್ತೂರು, ಶ್ರೀ ಹನುಮಾನ್ ಮಂದಿರ ಸಾಂತ್ವನ ಸೇವಾ ಟ್ರಸ್ಟ್ ರಿ. ಪುತ್ತೂರು, ಭವತಿ ಭಿಕ್ಷಾಂದೇಹಿ ಬಡವರ ಬಂಧು-ಸೇವಾ ತಂಡ ಕುಕ್ಕಿಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ, ಪುತ್ತೂರು ವಿಷನ್ ವಿ ಕೇರ್ ಅಪ್ಟಿಕಲ್ಸ್, ಪುತ್ತೂರು ಇವರ ಸಹಭಾಗಿತ್ವದಲ್ಲಿ ಆಯ್ದ ಅಶಕ್ತ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಹಾಗೂ ಅನಾರೋಗ್ಯ ಪೀಡಿತರಿಗೆ ಆಹಾರ ಸಾಮಾಗ್ರಿ ವಿತರಣಾ ಕಾರ್ಯಕ್ರಮ, ವಿಷನ್ ಐ ಕೇರ್ ಅಪ್ಟಿಕಲ್ಸ್, ಪುತ್ತೂರು ಇವರ ಸಹಭಾಗಿತ್ವದಲ್ಲಿ ನೇತ್ರದಾನ ನೋಂದಣಿ ಮತ್ತು ಉಚಿತ ಕಣ್ಣಿನ ಚಿಕಿತ್ಸಾ ತಪಾಸಣಾ ಶಿಬಿರ, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಪುತ್ತೂರು ಇವರ ಸಹಭಾಗಿತ್ವದಲ್ಲಿ ಉಚಿತ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಅ.27 ರಂದು ಲಯನ್ಸ್ ಸೇವಾಮಂದಿರದಲ್ಲಿ ನಡೆಯಲಿದೆ.
ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.