ತಿರುವನಂತಪುರಂ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಾಹನ ಸೇರಿದಂತೆ ಬೆಂಗಾವಲು ವಾಹನಗಳು ಸರಣಿ ಅಪಘಾತ ಸಂಭವಿಸಿದ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಅಪಾಯದಿಂದ ಪಾರಾಗಿರುವುದಾಗಿ ಹೇಳಲಾಗಿದೆ. ಕೊಟ್ಟಾಯಂಗೆ ಭೇಟಿ ನೀಡಿ ರಾಜ್ಯ ರಾಜಧಾನಿಗೆ ವಾಪಸ್ಸಾಗುವ ವೇಳೆ ತಿರುವನಂತಪುರಂ ಬಳಿ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬ್ರೇಕ್ ಹಾಕಿದ ಪರಿಣಾಮ ಸಿಎಂ ವಾಹನಕ್ಕೆ ಬೆಂಗಾವಲು ವಾಹನಗಳು ಸರಣಿ ಡಿಕ್ಕಿ ಹೊಡೆದಿದೆ. ವಾಹನಗಳು ಸ್ವಲ್ಪ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಮುಖ್ಯಮಂತ್ರಿಗಳನ್ನು ಬೇರೆ ವಾಹನದ ಮೂಲಕ ಕಳುಹಿಸಿಕೊಡಲಾಯಿತು.
ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.