ಮಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು ಜೂ. 14ರ ಭಾನುವಾರದಿಂದಲೇ ಉಭಯ ಜಿಲ್ಲೆಗಳಾದ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ.
ಜೂ.14 ರ ಸೋಮವಾರ ಮುಂಜಾನೆಯಿಂದಲೇ ಮಳೆ ಇನ್ನಷ್ಟು ತೀವ್ರಗೊಂಡಿದ್ದು ಎಡೆಬಿಡದಂತೆ ನಿರಂತರವಾಗಿ ಸುರಿಯುತ್ತಿದೆ. ನಗರದಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ನಗರದ ಹಲವೆಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಜಿಲ್ಲೆಯಲ್ಲಿ ಕೆಲವೆಡೆ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ. ಗಾಳಿ ಮತ್ತು ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ.
ಹವಮಾನ ಇಲಾಖೆ ಇಂದಿನಿಂದ ಜೂ.17 ರ ಬೆಳಗ್ಗೆ 8.30 ರವರೆಗೆ ಅರೆಂಜ್ ಅಲರ್ಟ್ ಘೋಷಿಸಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.