ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ದೀಪಾವಳಿ ಶುಭ ತಂದಿದೆ.
ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನು ಮಾನ್ಯ ನ್ಯಾಯಾಲಯ ವಿಧಿಸಿದೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.