ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಸೆಟ್‌ಗಾಗಿ ಸಾವಿರಾರು ಮರಗಳನ್ನು ನಾಶ ಮಾಡಿರುವ ಆರೋಪ ಕೇಳಿ ಬಂದಿದೆ.
ಆರೋಪದ ಬೆನ್ನಲ್ಲೇ ಸ್ಥಳ ಪರಿಶೀಲನೆ ನಡೆಸಿರುವ ಅರಣ್ಯ ಸಚಿವರು, ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟ್‌ಲೈಟ್ ಚಿತ್ರಗಳಿಂದ ಈ ಕೃತ್ಯ ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದಿದ್ದಾರೆ.
ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಹಳೆಯ ಸ್ಯಾಟ್‌ಲೈಟ್ ಚಿತ್ರ ಹಾಗೂ ಈಗಿನ ಸ್ಯಾಟ್ ಲೈಟ್ ಚಿತ್ರವನ್ನ ಹಂಚಿಕೊಂಡಿದ್ದಾರೆ. ಅರಣ್ಯ ಭೂಮಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಅಂತಾ ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಕ್ಸ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ.


























