ಪುತ್ತೂರು : ದೀಪಾವಳಿ ಪ್ರಯುಕ್ತ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನ.2 ರಂದು ನಡೆಯಲಿರುವ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸಲಿದ್ದಾರೆ.
ಡಿಸಿಎಂ ಪ್ರವಾಸದ ಬಗ್ಗೆ ಮಾಹಿತಿ ಹೊರಡಿಸಿರುವ ಹೆಚ್ಚುವರಿ ಆಪ್ತ ಕಾರ್ಯದರ್ಶಿ ನ.2 ರಂದು ಡಿ.ಕೆ. ಶಿವಕುಮಾರ್ ಅವರು ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದ್ದಾರೆ.

























