ಪುತ್ತೂರು : ಅಕ್ಷಯ ಎಜುಕೇಶನಲ್ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಕಾರ್ಯಕ್ರಮವನ್ನು ಸ್ಥಳೀಯ ಆರ್ಯಾಪು ಗ್ರಾಮ ಪಂಚಾಯತ್ನಲ್ಲಿ ಮಾಡಲಾಯಿತು.
ಕಾಲೇಜಿನ ಆಂಗ್ಲವಿಭಾಗದ ಮುಖ್ಯಸ್ಥೆ ರಶ್ಮಿ. ಕೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸರಕಾರದ ಆಡಳಿತ ವ್ಯವಸ್ಥೆಯಲ್ಲಿನ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯಲ್ಲಿನ ಕೊರತೆ, ದುರ್ಬಲವಾದ ಕಾನೂನು ಮತ್ತು ಶಿಕ್ಷೆಗಳು ಜನಸಾಮಾನ್ಯರ ಮೇಲೆ ಋಣಾತ್ಮಕ ಪ್ರಭಾವ ಬೀರುತ್ತದೆ .
ಸ್ಥಳೀಯ ಮಟ್ಟದಲ್ಲಿ ಗ್ರಾಮೀಣ ಪ್ರದೇಶದ ಜನರಿಗಿರುವ ಆಡಳಿತ ವ್ಯವಸ್ಥೆಯಲ್ಲಿನ ಅಪಪರಿಪೂರ್ಣಜ್ಞಾನವನ್ನು ದುರ್ಬಳಕೆ ಮಾಡುತ್ತಿರುವ ನೌಕರ ಶಾಹಿ ವರ್ಗ ಹಲವು ರೀತಿಯಲ್ಲಿ ಭ್ರಷ್ಟಾಚಾರ ಮಾಡುತ್ತಿದೆ. ಕಚೇರಿಗೆ ಸಂಬಂಧಿಸಿದ ವಿಷಯಗಳಲ್ಲಿ ಹಣವಸೂಲಿ, ತೆರಿಗೆಯಲ್ಲಿ ಸಂಗ್ರಹಿಸಿದ ಹಣದದುರುಪಯೋಗ, ಅವ್ಯವಹಾರಗಳುನಿರಂತರವಾಗಿ ನಡೆಯುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವು ದೇಶದ ಆರೋಗ್ಯಕರ ಬೆಳವಣಿಗೆಗೆ ನೇರ ಪರಿಣಾಮಬೀರುತ್ತದೆ. ಈ ನಿಟ್ಟಿನಲ್ಲಿ ಜನರ ಜೀವನಮಟ್ಟ ಸುಧಾರಿಸಲು ಆಡಳಿತ ವ್ಯವಸ್ಥೆಯಲ್ಲಿ ಸಾಕಷ್ಟು ಪ್ರಾಮಾಣಿಕ ಸುಧಾರಣೆ,ನಿರಂತರ ಜನಜಾಗೃತಿ ಕಾರ್ಯಕ್ರಮಗಳು ಭ್ರಷ್ಟಾಚಾರ ತಡೆಗಟ್ಟಲು ಸಹಕಾರಿಯಾಗಬಹುದು ಎಂದು ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1ರ ಕಾರ್ಯಕ್ರಮಮಾಧಿಕಾರಿ ಕಿಶೋರ್ಕುಮಾರ್ರೈಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ 2ರ ಕಾರ್ಯಕ್ರಮಾಧಿಕಾರಿ ಮೇಘಶ್ರೀ, ಕಾಲೇಜಿನ ಉಪಪ್ರಾಂಶುಪಾಲರಾದ ರಕ್ಷಣ್ಟಿಆರ್ಉಪಸ್ಥಿತರಿದ್ದರು. ಎನ್ಎಸ್ಎಸ್ಘಟಕಗಳ ವಿದ್ಯಾರ್ಥಿನಾಯಕ, ನಾಯಕಿಯರು, ರಾಷ್ಟ್ರೀಯ ಸೇವಾಯೋಜನೆಯ ಸೇವಕರು ಉಪಸ್ಥಿತರಿದ್ದರು. ಎನ್ಎಸ್ಎಸ್ವಿದ್ಯಾರ್ಥಿನಿ ವಿಂಧುಶ್ರೀ ಸ್ವಾಗತಿಸಿ, ವಂದಿಸಿ ಮತ್ತು ಕಾರ್ಯಕ್ರಮವನ್ನು ನಿರೂಪಿಸಿದರು.