ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು, ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಎಡಬದಿಯಲ್ಲಿ ಕುಳಿತ್ತಿದ್ದ ಮಹಿಳೆಗೆ ತಲೆ ಭಾಗಕ್ಕೆ ಗಂಭೀರ ಏಟಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕಾರಿನಲ್ಲಿದ್ದ ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.