ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ್ (35) ನೇಣಿಗೆ ಶರಣಾಗಿದ್ದಾರೆ.
ರುದ್ರಣ್ಣ ಯಡವಣ್ಣವರ್ ಅವರನ್ನು ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೋಮವಾರ (ನ.05) ಆದೇಶ ಹೊರಡಿಸಿದ್ದರು.
ರುದ್ರಣ್ಣ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರುದ್ರಣ್ಣ ಅವರ ಪತ್ನಿ ಗಿರಿಜಾ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.