ಜಗದ್ಗುರು ಶಂಕರಾಚಾರ್ಯ ತೋಟಕಾಚಾರ್ಯ ಮಹಾಸಂಸ್ಥಾನ ಶ್ರೀಮದೆಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ವಾಹನದಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದು ಖಂಡನೀಯ.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚ ಉಪಾಧ್ಯಕ್ಷ ಮಹಮ್ಮದ್ ಅಸ್ಗರ್, ಮುಡಿಪು ಹೇಳಿದ್ದಾರೆ.
ಪ್ರಸಿದ್ಧ ಶಂಕರಾಚಾರ್ಯ ಪರಂಪರೆ ಹಾಗು ದೀರ್ಘ ಇತಿಹಾಸ ಹೊಂದಿರುವ ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ವಾಹನದಲ್ಲಿರುವ ಸಂದರ್ಭದಲ್ಲಿ ನಡೆದಿರುವ ದಾಳಿ ಅತ್ಯಂತ ಖoಡನೀಯ.
ಜಾತಿ ಮತವೆನ್ನದೆ ಎಲ್ಲರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ, ಕಲೆ ಸಾಹಿತ್ಯ ಸಾಮಾಜಿಕ ಚಟುವಟಿಕೆಗಳಿಗೆ ಅಗತ್ಯ ಪ್ರಾಶಸ್ತ್ಯ ನೀಡಿ ಸಮಾಜಕ್ಕೋಸ್ಕರ ತನ್ನ ಸರ್ವಸ್ವವನ್ನೇ ಮುಡಿಪಾಗಿಟ್ಟಿರುವ ಸ್ವಾಮೀಜಿಯವರ ಮೇಲಿನ ದಾಳಿಯನ್ನು ಖಂಡಿಸುತ್ತಾ ಇದರ ಕುರಿತು ಉನ್ನತ ಮಟ್ಟದ ತನಿಖೆ ಮಾಡಬೇಕು ಹಾಗೂ ಸ್ವಾಮೀಜಿಗೆ ಹೆಚ್ಚಿನ ಭದ್ರತೆಯನ್ನು ಸರಕಾರ ನೀಡಬೇಕು.
ಸ್ವಾಮೀಜಿಯವರು ವಾಹನದಲ್ಲಿರುವ ಸಂದರ್ಭದಲ್ಲಿ ಆಗಿರುವ ದಾಳಿಯಾದ್ದರಿಂದ ಕೇರಳ ಸರಕಾರ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕೆಂದು ಆಗ್ರಹಿಸಿದ್ದಾರೆ.