ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್ ತೊಡಾರ್ ಮೈಟ್ ಕಾಲೇಜ್ ಬಳಿ ಕಾಲೇಜಿನ ಬಸ್ಸನ್ನು ಓವರ್ ಟೇಕ್ ಮಾಡುವ ಸಂದರ್ಭ ಈ ಘಟನೆ ನಡೆದಿದೆ.
ಸದ್ಯ ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ವಿದ್ಯಾರ್ಥಿಗಳು ಬಸ್ ನ ಗಾಜುಗಳನ್ನು ಒಡೆದು ಹಾನಿಮಾಡಿದ್ದಾರೆ ಎಂದು ತಿಳಿದು ಬಂದಿದೆ.