ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದು ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು , ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದಳು ಎಂದು ತಿಳಿದು ಬರಬೇಕಾಗಿದೆ.