ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ಬೈಕ್ ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಕಂಬಳಬೆಟ್ಟು ಬಳಿ ಎರಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಘಟನೆ ಪರಿಣಾಮ ಕಾರು ಸಂಪೂರ್ಣ ಅಡಿಮೇಲಾಗಿ ಬಿದ್ದಿದ್ದು ದ್ವಿಚಕ್ರ ವಾಹನ ಸವಾರರಿಗೆ ಗಾಯಗಳಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಾಗಿದೆ ಎಂದು ತಿಳಿದು ಬಂದಿದೆ.