ಬೆಂಗಳೂರು: ಜಮೀರ್ ಅಹ್ಮದ್ ಖಾನ್ ವಿರುದ್ಧ ಧರ್ಮ ಮತ್ತು ಜಾತಿಯ ಹೆಸರಲ್ಲಿ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆ ಪೊಲೀಸರು ಪುನೀತ್ರನ್ನು ನಿನ್ನೆ ರಾತ್ರಿ ಬಂಧಿಸಿ, ನ್ಯಾಯಾಧೀಶರೊಬ್ಬರ ಮುಂದೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ.
ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಯಿತು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ

























