ಉಡುಪಿ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಹೆಬ್ರಿ ಸಮೀಪ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ನಕ್ಸಲರ ಕಮಾಂಡರ್ ವಿಕ್ರಂ ಗೌಡ ಎನ್ಕೌಂಟರ್ ಆಗಿದ್ದಾನೆ ಎಂದು ಹೇಳಲಾಗುತ್ತಿದೆ.
ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ (Anti Naxal Force) ಕಾರ್ಯಾಚರಣೆಗೆ ಮುಂದಾಗಿತ್ತು. ನಿನ್ನೆ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ.
ಈ ಕೂಂಬಿಂಗ್ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಇದ್ದ. ಪೊಲೀಸರ ಗುಂಡಿನ ದಾಳಿಗೆ ಈತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ನಡೆಸಲಾಗುತ್ತಿದೆ.