ಬಂಟ್ವಾಳ : ಮೈಸೂರಿನಿಂದ ಕೊರೊನಾ ಸೊಂಕಿತನನ್ನು ಮಂಗಳೂರಿಗೆ ಕರೆ ತರುವ ಅಂಬ್ಯುಲೆನ್ಸ್, ಟ್ಯಾಂಕರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಐವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಡಿಕೇರಿ ಕಡೆಯಿಂದ ಮಂಗಳೂರು ಆಸ್ಪತ್ರೆಗೆ ರೋಗಿಯನ್ನು ಕರೆತರುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಅಂಬ್ಯುಲೆನ್ಸ್ ನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಆದರೆ ಅಂಬ್ಯುಲೆನ್ಸ್ ವಾಹನದಲ್ಲಿದ್ದ ಯಾರಿಗೆ ಗಾಯವಾಗಿದೆ ಎಂಬ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
ಬೈಕ್ ಸವಾರ ಪ್ರಶಾಂತ್ ಬಾಳ್ತಿಲ ಕೋರ್ಯ ನಿವಾಸಿಯಾಗಿದ್ದು ಆತನಿಗೆ ಸಣ್ಣಪುಟ್ಟ ಗಾಯವಾಗಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಂಬ್ಯುಲೆನ್ಸ್ ನಲ್ಲಿದ್ದು ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.