ಬೆಂಗಳೂರು: ಬೈಕ್ ಅಪಘಾತವಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಸ್ಯಾಂಡಲ್ವುಡ್ ನಟ ಸಂಚಾರಿ ವಿಜಯ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸದ್ಯ ಹುಟ್ಟೂರಿನತ್ತ ಸಂಚಾರಿ ವಿಜಯ್ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತಿದೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಹಲವಾರು ಸ್ಯಾಂಡಲ್ವುಡ್ ನಟ ನಟಿಯರು ಕಲಾವಿದರು ಹಾಗೂ ಗಣ್ಯರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದರು. ಚಿಕ್ಕಮಗಳೂರಿನಲ್ಲಿ ಇಂದು ಸಂಜೆ ವಿಜಯ್ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
ಕಡೂರು ತಾಲೂಕಿನ ವಿಜಯ್ ಸ್ವಗ್ರಾಮ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಂಚನಹಳ್ಳಿಯಲ್ಲಿ ವಿಜಯ್ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, 25 ಜನರಿಗೆ ಮಾತ್ರ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.
ತೂಮಕುರಿನ ಶ್ರೀ ಕುಪ್ಪುರು ಗದ್ದುಗೆ ಮಠದ ಡಾ.ಯತೀಶ್ವರ್ ಶಿವಚಾರ್ಯ ಸ್ವಾಮಿ ನೇತೃತ್ವದಲ್ಲಿ ಹಿಂದೂ ಲಿಂಗಾಯತ ಸಂಪ್ರದಾಯ ಪ್ರಕಾರ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 2 ಗಂಟೆ ಬಳಿಕ ವಿಧಿವಿಧಾನ ಆರಂಭ ಆಗಲಿದೆ ಎಂಬ ಮಾಹಿತಿ ಲಭಿಸಿದೆ.