ನೆಲಮಂಗಲ: ಆ್ಯಪ್ ಮೂಲಕ ಸಾಲ ಪಡೆದಿದ್ದ ವ್ಯಕ್ತಿಗೆ ಕರೆ ಮಾಡಿ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಗೂ ಕಿರುಕುಳ ನೀಡಿದ್ದಕ್ಕೆ ಖಾಸಗಿ ಚಾನಲ್‌ವೊಂದರ ಕ್ಯಾಮರಾಮನ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಕಿರಣ್(32) ಮೃತ ಕ್ಯಾಮರಾಮನ್. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಕಿರಣ್ ಆ್ಯಪ್‌ವೊಂದರ ಮೂಲಕ 2 ಲಕ್ಷ ರೂ. ಸಾಲ ಪಡೆದಿದ್ದರು. ಸಾಲದ ಹಣ ವಾಪಸ್ ನೀಡದಿದ್ದರೆ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಹೀಗಾಗಿ ಅವರ ಕಿರುಕುಳಕ್ಕೆ ನೊಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಾಲ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.