ಕಾರ್ಕಳ: ಇಲ್ಲಿನ ದುರ್ಗಾ ಗ್ರಾಮದ ದುರ್ಗಾ ಫಾಲ್ಸ್‌ಗೆ ಈಜಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಗುರುವಾರ (ನ.28) ಮಧ್ಯಾಹ್ನ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲಜಿನ ವಿದ್ಯಾರ್ಥಿ ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಇಂದು 7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.