ಪುತ್ತೂರು: ಪುತ್ತೂರು ತಾಲೂಕಿನ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಕಾಂಚನ ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎರಡು ಟೆಲಿವಿಷನ್ ಗಳನ್ನು ಶಾಸಕರಾದ ಸಂಜೀವ ಮಠಂದೂರು ರವರ ಮೂಲಕ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಮುಳಿಯ, ಉಪ್ಪಿನಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೆ.ವಿ.ಪ್ರಸಾದ್, ಉಪಾಧ್ಯಕ್ಷರಾದ ಸುನಿಲ್ ದಡ್ಡು, ಸಂಘದ ಸದಸ್ಯರು, ಪಂಚಾಯತ್ ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.